

ಚಾಮರಾಜನಗರ: ಗುಜರಾತ್‌ನಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವುದಕ್ಕೆ ಬಿಜೆಪಿ ಜಿಲ್ಲಾ ಘಟಕ ವತಿಯಿಂದ ಗುರುವಾರ ಸಂಭ್ರಮಾಚರಿಸಲಾಯಿತು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಮುಖಂಡರು ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮವಣೆಗೊಂಡರು. ಬಳಿಕ ಸ್ಥಳದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಡಾ ಅಧ್ಯಕ್ಷ ನಿಜಗುಣರಾಜು ಡೋಲು ಬಡಿದರೆ ಮುಖಂಡರು ಪಕ್ಷದ ಬಾವುಟ ಹಿಡಿದು ನೃತ್ಯ ಮಾಡಿದರು. ಪಕ್ಷ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಜೈಕಾರ ಕೂಗಿದರು.
ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎನ್.ಬಾಲರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಮಂಗಲ ಶಿವಕುಮಾರ್, ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಬಿ.ಸೂರ್ಯಕುಮಾರ್, ನಗರ ಘಟಕದ ಅಧ್ಯಕ್ಷ ರಾಜು, ಶಿವಣ್ಣ, ಮಹದೇವ ನಾಯಕ, ಬೇಡರಪುರದ ಬಸವಣ್ಣ, ಕೂಸಣ್ಣ ಕರಿನಂಜನಪುರ ಇತರರು ಭಾಗವಹಿಸಿದ್ದರು.