

ಗುಂಡ್ಲುಪೇಟೆ: ಈ ಬಾರಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ತಾಲೂಕಿನ ತೆರಕಣಾಂಬಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಯ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ. ಈ ಬಾರಿಯೂ ಮತದಾರರ ಒಲವು ಬಿಜೆಪಿಯ ಕಡೆಗಿದೆ. ಆದರೆ ಪ್ರತಿ ಗ್ರಾಮಕ್ಕೂ ಅಭ್ಯರ್ಥಿಯು ಭೇಟಿ ನೀಡಲು ಸಮಯಾವಕಾಶ ಇಲ್ಲದ ಕಾರಣ ಆಯಾ ಗ್ರಾಮಗಳ ಕಾರ್ಯಕರ್ತರೇ ಅಭ್ಯರ್ಥಿಯಾಗಿ ತಮ್ಮ ಬೂತ್‌ಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಉಪಾಧ್ಯಕ್ಷ ಹಿರೀಕಾಟಿ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮಾಜಿ ಮಂಡಲಾಧ್ಯಕ್ಷ ಎಲ್.ಸುರೇಶ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನಸ್ವಾಮಿ, ಕನ್ನೆಗಾಲ ಮಾದಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್, ಮುಖಂಡರಾದ ನವೀನ್ ಮೌರ್ಯ, ಎಸ್.ಸಿ ಮೋರ್ಚಾ ಅಧ್ಯಕ್ಷ ನಾಗುಸ್ವಾಮಿ, ಮಾಧ್ಯಮ ಸಂಚಾಲಕ ಎಸ್.ಸಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.