ಚಾಮರಾಜನಗರ: ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಜೆಎಸ್ಎಸ್ ಅನಾಥಾಲಯದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
5 ರಿಂದ 10ನೇ ತರಗತಿಯವರಿಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗಿದೆ. ಅರ್ಜಿಗಳನ್ನು ನೇರವಾಗಿ ಅಥವಾ ದೂರವಾಣಿಯಲ್ಲಿ ಸಂಪರ್ಕಿಸಿ, ಇ-ಮೇಲ್ ಹಾಗೂ ವಾಟ್ಸ್ಆ್ಯಪ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಲಯಪಾಲಕ ಸೋಮೇಶ್ ಅವರನ್ನು ಮೊ:9535252881 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.