ರೇಷ್ಮೆ ಕೃಷಿ ಕ್ಷೀಣಿಸಿದ್ದೇಕೆ?

Published on

ಚಾಮರಾಜನಗರ: ಒಂದು ಕಾಲದಲ್ಲಿ ರೇಷ್ಮೆ ಕೃಷಿಗೆ ಹೆಸರುವಾಸಿಯಾಗಿದ್ದ ಚಾಮರಾಜನಗರದಲ್ಲಿ ದಿನ ಕಳೆದಂತೆ ರೇಷ್ಮೆ ಕೃಷಿಕರ ಸಂಖ್ಯೆ ಕಡಿಮೆಯಾಗಿದೆ. ಇದಕ್ಕೆ ಕಾರಣವೇನು ಎಂದು ಸಚಿವರಾದ ಕೆ.ವೆಂಕಟೇಶ್ ಮತ್ತು ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳನ್ನು ಪ್ರಶ್ನಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡುತ್ತಿಲ್ಲ, ರೈತರನ್ನು ಸಂಪರ್ಕ ಮಾಡಿ, ಸೌಲಭ್ಯಗಳ ಬಗ್ಗೆ ವಿವರಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಡಿಗುಂಡ ರೇಷ್ಮೆ ಮಾರುಕಟ್ಟೆಯ ಉಪ ನಿರ್ದೇಶಕ ರಾಜಪ್ಪ ಮಾತನಾಡಿ, ಮಳೆಯಾಶ್ರಿತ ಪ್ರದೇಶವಾಗಿದ್ದಾಗ ರೇಷ್ಮೆ ಕೃಷಿ ನಡೆಯುತ್ತಿತ್ತು. ನಂತರದ ದಿನಗಳಲ್ಲಿ ನೀರಾವರಿ ಸೌಲಭ್ಯ ದೊರೆಯುತ್ತಿದ್ದಂತೆಯೇ ಕಡಿಮೆಯಾಯಿತು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ವೆಂಕಟೇಶ್, ರೇಷ್ಮೆ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಿ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net