ಎಸ್ಸಿ, ಎಸ್ಟಿ ಸಮಿತಿ ಸಭೆ ಕರೆಯಲು ಎಡಿಸಿಗೆ ಮನವಿ

Published on

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ಕರೆಯಬೇಕು ಹಾಗೂ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ ನಾಮಫಲಕ ಅಳವಡಿಸುವಂತೆ ಕೋರಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಒಂದು ವರ್ಷದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಡಳಿತದಿಂದ ನಡೆಸಿಕೊಟ್ಟಿಲ್ಲ. ಆದ್ದರಿಂದ ಸಭೆ ಕರೆದು ಸಮುದಾಯಗಳ ಕುಂದುಕೊರತೆ ಆಲಿಸಿ ಪರಿಹರಿಸಬೇಕು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯ ವೃತ್ತಕ್ಕೆ ನಾಮಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ್ ಬಣದ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಡಿಎಸ್‌ಎಸ್‌ನ ಆಟೋ ಉಮೇಶ್, ಶಂಕರಮೂರ್ತಿ ಹನೂರು, ಮಹದೇವಸ್ವಾಮಿ, ಸೋಮಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net