ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಪೂರ್ವ ಸಿದ್ಧತಾ ಸಭೆಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೆ.30ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪರಿಶಿಷ್ಟ ವರ್ಗ ಹಾಗೂ ಇತರ ಜನಾಂಗದ ಸಂಘ, ಸಂಸ್ಥೆ ಮತ್ತು ಕನ್ನಡಪರ ಸಂಘ ಸಂಸ್ಥೆಯ ಪದಾಧಿಕಾರಿಗಳು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.