

ಚಾಮರಾಜನಗರ: ಸಿಲಿಂಡರ್ ಸ್ಫೋಟದಿಂದ ಮನೆ ಹಾನಿಗೊಂಡಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ಸಾಕಮ್ಮ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಗಳವಾರ ಸಹಾಯಧನ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ತಾಲೂಕಿನ ನಾಗವಳ್ಳಿ ಗ್ರಾಮದ ನಿವಾಸಿ ಸಾಕಮ್ಮ ಅವರ ಮನೆಯಲ್ಲಿ ಕೆಲವು ದಿನಗಳ ಹಿಂದೆ ಸಿಲಿಂಡರ್ ಸ್ಫೋಟಗೊಂಡಿತ್ತು. ಇದರಿಂದ ಮನೆಗೆ ಹಾನಿಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದಿಂದ ನೆರವು ನೀಡಲಾಯಿತು. ಸಂಘದ ಜಿಲ್ಲಾ ನಿರ್ದೇಶಕಿ ಲತಾ ಬಂಗೇರ, ತಾಲೂಕು ಯೋಜನಾಧಿಕಾರಿ ಹರೀಶ್‌ಕುಮಾರ್ ಶೆಟ್ಟಿ, ನಾಗವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ವಮಾಲಾ, ಪುಟ್ಟನಂಜಮ್ಮ, ರಂಗಸ್ವಾಮಿ, ಮೇಲ್ವಿಚಾರಕ ನವೀನ್‌ಕುಮಾರ್, ಸೇವಾ ಪ್ರತಿನಿಧಿ ಗೌರಮ್ಮ, ರಾಜೇಂದ್ರ ಇತರರು ಇದ್ದರು.