

ಚಾಮರಾಜನಗರ: ರಾಜ್ಯ ಸರ್ಕಾರ ಅರಿಶಿಣ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿ ಫೆ.16ರಂದು ನಗರದಲ್ಲಿ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಹೇಳಿದರು.
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಅರಿಶಿಣ ಬೆಳೆಗಾರರ ನೆರವಿಗೆ ಎಂಐಎಸ್ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯನ್ನು ಜಾರಿ ಗೊಳಿಸಬೇಕೆಂದು ಒತ್ತಾಯಸಿ ಜಿಲ್ಲಾಕಾರಿಗೆ ಮನವಿ ಸಲ್ಲಿಸಲಾ ಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರೈತರು ಬೈಕ್ ರ‌್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೂಡಲೇ ಯೋಜನೆಯನ್ನು ಜಾರಿ ಸರ್ಕಾರಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚಳವಳಿಯ ರೂಪ ಪಡೆದುಕೊಳ್ಳಲಿದೆ. ಇದಕ್ಕೆ ಜನಪ್ರತಿನಿಗಳೇ ನೇರ ಕಾರಣವಾಗುತ್ತಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ. ಪ್ರಸ್ತುತ ಒಂದು ಕ್ವಿಂಟಾಲ್ ಅರಿಶಿಣಕ್ಕೆ 6 ಸಾವಿರ ಇದೆ. ಇದನ್ನು 17500 ಏರಿಕೆ ಮಾಡಬೇಕು. ಆ ಮೂಲಕ ರೈತರಿಗೆ ವೈಜ್ಞಾನಿಕ ಬೆಲೆ ನೀಡಬೇಕು ಎಂದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಾತನಾಡಿ, ಅಸ್ಸಾಂ ಬಿಟ್ಟರೆ ಜಿಲ್ಲೆಯ ಗುಂಡ್ಲುಪೇಟೆ ಭಾಗದಲ್ಲಿ ಬೆಳೆಯುವ ಅರಿಶಿಣ ಉತ್ತಮ ಗುಣಮಟ್ಟ ಹೊಂದಿದೆ. ಪ್ರಸ್ತುತ ದಿನಗಳಲ್ಲಿ ಅರಿಶಿಣ ಕೀಳಲು ಕೂಲಿ ಆಳುಗಳ ಕೊರತೆ ಇದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅರಿಶಿಣ ಕೀಳಲು ಯಂತ್ರ ಕೊಡಬೇಕು. ಅಲ್ಲದೇ ಅರಿಶಿಣಕ್ಕೆ ವೈಜ್ಞಾನಿಕ ಬೆಲೆಯಡಿ ದರ ನಿಗದಿಪಡಿಸಿದಾಗ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಚಂದ್ರಶೇಖರ್, ನಾಗಾರ್ಜುನ, ಚಿದಾನಂದ ಇದ್ದರು.