6, 7 ರಂದು ಚುನಾವಣೆ ಟಿಕೆಟ್‌ಗಾಗಿ ಸಂದರ್ಶನ

2kgl-1 GANESH
Published on

ಕೊಳ್ಳೇಗಾಲ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದ್ದು, ಚುನಾವಣಾ ಆಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ. ಗಣೇಶ್ ತಿಳಿಸಿದರು.

ಸಂದರ್ಶನವು ಜ.6, 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ಈ ವಿಚಾರ ಹಾಗೂ ಇತರ ಹಲವು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ 5000 ರೂ. ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10,000 ಸಂದರ್ಶನ ಶುಲ್ಕವಿರುತ್ತದೆ ಎಂದು ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂದರ್ಶನದ ನಂತರ, ರಾಜ್ಯ ಸಮಿತಿಯ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ ಮೊ.9611720802 ಸಂಖ್ಯೆಗೆ ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಮಧುನಾಯಕ್, ಚಂದ್ರಶೇಖರ್, ಶ್ರೀನಿವಾಸ್ ಬೂದಬಾಳು, ಸದಸ್ಯರಾದ ರವಿಕುಮಾರ್, ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net