ಮ.ಬೆಟ್ಟದಲ್ಲಿ ಮೂಲಸೌಕರ್ಯ ಮತ್ತಷ್ಟು ಹೆಚ್ಚಿಸಲಿ

08 HANUR 1
Published on

ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲಸೌಕರ್ಯಗಳು ಇನ್ನಷ್ಟು ಹೆಚ್ಚಾಗಬೇಕು ಎಂದು ಹುಣಸೂರು ಗುರುಲಿಂಗ ಜಂಗಮದೇವರ ಮಠದ ಶ್ರೀ ನಟರಾಜ ಸ್ವಾಮೀಜಿ ತಿಳಿಸಿದರು.

ತಾಲೂಕಿನ ತಾಳುಬೆಟ್ಟದಲ್ಲಿ ಭಾನುವಾರ ಆಯೋಜಿಸಿದ್ದ ಶಾಂತಿ, ಸೌಹಾರ್ದ ಹಾಗೂ ಸದ್ಭಾವನಾ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮ.ಬೆಟ್ಟ ಧಾರ್ಮಿಕ, ಪುಣ್ಯ ಕ್ಷೇತ್ರ. ಹಾಗಾಗಿ ಇಲ್ಲಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಭಕ್ತರ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಮೂಲಸೌಕರ್ಯಗಳಾಗಬೇಕು. ಈ ದಿಸೆಯಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಹೆಚ್ಚಿನ ಮುತುರ್ವಜಿ ವಹಿಸಬೇಕು. ಈ ಮೂಲಕ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.

ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ತಾಲೂಕಿನ ಕೆಲವು ಗ್ರಾಮಗಳಲ್ಲಿ ಮೂಲಸೌಕರ್ಯಗಳು ಕುಂಠಿತವಾಗಿದೆ. ಜನರ ಆಶಯದಂತೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಜತೆಗೆ ಮ.ಬೆಟ್ಟದಲ್ಲಿ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಮುಖಂಡರಾದ ಶಿವಮೂರ್ತಿ, ಗಿರೀಶ್, ವಿಜಯ್, ಕುಮಾರ್ ಹಾಗೂ ಪಾದಯಾತ್ರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net