20, 21ರಂದು ವಿದ್ಯುತ್ ವ್ಯತ್ಯಯ

Published on

ಹನೂರು: ಲೊಕ್ಕನಹಳ್ಳಿ-ಹನೂರು ಮಾರ್ಗದ ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಜ.20, 21ರಂದು ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಎಇಇ ಶಂಕರ್ ತಿಳಿಸಿದ್ದಾರೆ.

ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಹಿನ್ನೆಲೆೆ ಸೆಸ್ಕ್ ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹನೂರು ಟೌನ್, ಉದ್ದನೂರು ಬೆಳತ್ತೂರು, ಮಹಾಲಿಂಗನಕಟ್ಟೆ ಹಾಗೂ ನಿರಂತರ ಜ್ಯೋತಿ ಫೀಡರ್‌ಗಳ ವ್ಯಾಪ್ತಿಯಲ್ಲಿ 2ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6ವೆರೆಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net