ಗಣರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿರಿ

19 HANUR 2
Published on

ಹನೂರು: ಈ ಬಾರಿಯ ಗಣರಾಜ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ಆಯೋಜಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಬಾರಿಯ 75ನೇ ಗಣರಾಜ್ಯೋತ್ಸವ ವಿಶೇಷವಾಗಿರುವುದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ಶಾಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸಂದೇಶ ನೀಡುವ ಹಾಗೂ ಸ್ಫೂರ್ತಿದಾಯಕ ಕಾರ್ಯಕ್ರಮವನ್ನು ರೂಪಿಸಬೇಕು ಎಂದರು.
ವಿವಿಧ ಇಲಾಖೆಯ ಅಧಿಕಾರಿಗಳು ಜಾವಬ್ದಾರಿ ವಹಿಸಿಕೊಂಡು ಕೆಲಸ ನಿರ್ವಹಿಸುವಂತೆ ಸಲಹೆ ನೀಡಿದರು.
ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ತಾಪಂ ಇಒ ಉಮೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಪಶು ವೈದ್ಯಾಧಿಕಾರಿ ಸಿದ್ದರಾಜು, ಪ.ಪಂ. ಮುಖ್ಯಾಧಿಕಾರಿ ಮಹೇಶ್‌ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಸೆಸ್ಕ್ ಎಇಇ ಶಂಕರ್, ಶಿರಸ್ತೆದಾರ್ ನಾಗೇಂದ್ರ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net