ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

Published on

ಚಾಮರಾಜನಗರ: ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ವತಿಯಿಂದ ಯಳಂದೂರು ತಾಲೂಕಿನ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ಕಂಪ್ಯೂಟರ್, ಎಂಬ್ರೈಡಿಂಗ್ ಹಾಗೂ ಲಘುವಾಹನ ಚಾಲನಾ ತರಬೇತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ 18 ರಿಂದ 40 ವರ್ಷ ವಯೋಮಿತಿಯ ಅರ್ಭ್ಯಥಿಗಳು ಯಳಂದೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಲಘುವಾಹನ ಚಾಲನಾ ತರಬೇತಿ ಪಡೆಯಲು ಇಚ್ಚಿಸುವವರು ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳ ದೃಢೀಕರಣದೊಂದಿಗೆ ಜ.25 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ:9480843093 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net