ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

23chn1
Published on

ಚಾಮರಾಜನಗರ: ಅಸ್ಸಾಂ ಮೂಲಕ ಸಾಗುತ್ತಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ಗಾಂಧಿ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಮೆರವಣಿಗೆ ಆರಂಭಿಸಿ ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ, ರಾಹುಲ್‌ಗಾಂಧಿ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ರಾಹುಲ್‌ಗಾಂಧಿ ಮೇಲೆ ಹಲ್ಲೆಗೆಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿಯವರು ಭಾರತದಲ್ಲಿ ರಾಮರಾಜ್ಯ ಮಾಡುತ್ತಿಲ್ಲ. ಗೂಂಡಾ ರಾಜ್ಯ ತರುವ ಕೆಲಸ ಮಾಡಿದ್ದಾರೆ ಎಂದು ದೂರಿದರು.
ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಅದರಂತೆಯೇ ಜಿಲ್ಲೆಯಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಮ್ಮ ನಾಯಕ ರಾಹುಲ್‌ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯನ್ನು ಯಶ್ವಸಿಯಾಗಿ ನಡೆಸುತ್ತಿರುವುದನ್ನು ಸಹಿಸದೇ ಬಿಜೆಪಿಯವರು ಗೂಂಡಾಗಳನ್ನು ಬಿಟ್ಟು ಹಲ್ಲೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇದು ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೂಲೆಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ, ಅರಕಲವಾಡಿ ಗುರುಸ್ವಾಮಿ, ಎಚ್ ವಿ. ಚಂದ್ರು, ತೋಟೋಶ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾರಾಜಶೇಖರಜತ್ತಿ, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಸದಾಶಿವ ಮೂರ್ತ, ರಮೇಶ್, ಕೊಪ್ಪಾಳಿ ಮಹದೇವನಾಯಕ, ಮುಖಂಡರಾದ ಡಿ.ಎನ್. ನಟರಾಜ್, ಸೋಮಣ್ಣ, ನಗರಸಭಾ ಸದಸ್ಯರಾದ ಚಿನ್ನಮ್ಮ, ಆರ್.ಪಿ.ನಂಜುಂಡಸ್ವಾಮಿ, ಸೈಯದ್ ರಫೀ, ಜಿ.ಪಂ. ಮಾಜಿ ಅಧ್ಯಕ್ಷ ಮಹದೇವಶೆಟ್ಟಿ, ಎಎಚ್‌ಎನ್ ಖಾನ್, ದೊಡ್ಡರಾಯಪೇಟೆ ಮೂರ್ತಿ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎನ್. ಲೋಕೇಶ್, ಜಿಲ್ಲಾ ಅಧ್ಯಕ್ಷ ಮೋಹನ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ವಡಗೆರೆ ಯೋಗೇಂದ್ರ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net