

ಚಾಮರಾಜನಗರ:ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆಯನ್ನು ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ, ಹೆಚ್.ಎಂ. ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನದ ಉದ್ಘಾಟನೆ ನೆರವೇರಲಿದೆ. ಸಂಜೆ 6 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ರಂಗಮಂದಿರದ ಮುಂಭಾಗ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.