ಹರದನಹಳ್ಳಿಯಲ್ಲಿ ಕಸದ ಸಮಸ್ಯೆ

25chn1
Published on

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮದ ಶ್ರೀ ದಿವ್ಯಲಿಂಗೇಶ್ವರ ದೇವಾಲಯದ ಮುಂಭಾಗ ಪ್ಲಾಸ್ಟಿಕ್ ತ್ಯಾಜ್ಯ ತುಂಬಿಹೋಗಿದು, ಇಡೀ ವಾತಾವರಣ ಕಲುಷಿತಗೊಂಡಿದೆ.

ಗ್ರಾಮದ ನಡುವೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲೇ ಶ್ರೀದಿವ್ಯಲಿಂಗೇಶ್ವರ ದೇವಾಲಯವಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಾಲಯದ ಮುಂಭಾಗ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ. ಆದರೆ ದೇವಾಲಯದ ಸುತ್ತಮುತ್ತ ಹಾಗೂ ಮುಂಭಾಗ ಪ್ಲಾಸ್ಟಿಕ್ ಮಯವಾಗಿದ್ದು, ಹಲವು ದಿನಗಳಿಂದ ನಿರಂತರವಾಗಿ ಕಸ ಸಂಗ್ರಹವಾಗುತ್ತಿದೆ. ಇದರಿಂದ ಭಕ್ತಾದಿಗಳು ಹಾಗೂ ನಿವಾಸಿಗಳಿಗೂ ಕಿರಿಕಿರಿ ಉಂಟಾಗುತ್ತಿದೆ. ಈ ಕುರಿತು ಗ್ರಾಮ ಪಂಚಾಯಿತಿ ಸದಸ್ಯರಾಗಲಿ, ಅಧಿಕಾರಿಗಳಾಗಲಿ ಈ ವರೆಗೂ ಯಾವುದೇ ರೀತಿಯ ಕ್ರಮ ವಹಿಸದ ಕಾರಣ ಕಸ ಸಂಗ್ರಹ ಹೆಚ್ಚುತ್ತಿದೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಭಕ್ತರಿಗೆ ತೊಂದರೆ ಉಂಟಾಗುತ್ತದೆ ಎಂದು ಗ್ರಾಮಸ್ಥರು ದೂರಿದರು. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕಸವನ್ನು ತೆರವುಗೊಳಿಸಿ ದೇವಾಲಯದ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net