

ಗುಂಡ್ಲುಪೇಟೆ: ನಮ್ಮ ರಾಷ್ಟ್ರದ ಇತಿಹಾಸ, ಸಂಸ್ಕೃತಿ ಹಾಗೂ ಹಿರಿಮೆಯ ಬಗ್ಗೆ ಜನರಲ್ಲಿ ಅಭಿಮಾನ ಹೆಚ್ಚಾದಾಗ ರಾಷ್ಟ್ರದ ಗೌರವವೂ ಹೆಚ್ಚುತ್ತದೆ ಎಂದು ಪಟ್ಟಣದ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ತಳವಾರ ಅಭಿಪ್ರಾಯಪಟ್ಟರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹೆಣ್ಣುಮಕ್ಕಳು ಇಂದು ಎಲ್ಲ ರಂಗಗಳಲ್ಲೂ ಛಾಪು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. 2017ರವರೆಗೆ ದೇಶದಲ್ಲಿ ಕಾನೂನು ದಿನ ಎಂದು ಆಚರಿಸಲಾಗುತ್ತಿದ್ದ ದಿನವನ್ನು ನಂತರ ಸಂವಿಧಾನ ದಿನಾಚರಣೆ ಎಂದು ಬದಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಜಿ.ಜೆ.ಶಿವಕುಮಾರ್, ಅಪರ ಸಿವಿಲ್ ನ್ಯಾಯಾಧೀಶೆ ಕಾಂತಮ್ಮ, ಸಹಾಯಕ ಸರ್ಕಾರಿ ಅಭಿಯೋಜಕ ರೇವಣ್ಣ, ವಕೀಲರಾದ ಮನು ಶ್ಯಾನುಭೋಗ್, ವೆಂಕಟೇಶ್, ಪುಟ್ಟಸ್ವಾಮಿ, ರವಿಕಾಂತ್, ಶಿವಣ್ಣ , ಅನಿಲ್, ಮಂಜುನಾಥ್. ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.