

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಚಿಕ್ಕಲ್ಲೂರು ಜಾತ್ರೆಯಲ್ಲಿ ಈ ಬಾರಿ ಪ್ರಾಣಿಗಳ ಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಹೇಳಿದರು.
ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಕರ್ನಾಟಕ ಪ್ರಾಣಿಬಲಿ ಪ್ರತಿಬಂಧಕ ಅಧಿನಿಯಮದಂತೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೊಳ್ಳೇಗಾಲ ತಾಲೂಕು ಆಡಳಿತ ಚಿಕ್ಕಲ್ಲೂರು ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿವೆ. ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘದ ಮನವಿಯಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರಾಣಿಬಲಿ ತಡೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಹಿಂಸಾ-ಪ್ರಾಣಿದಯಾ ಸಂಘ ಅಧ್ಯಾತ್ಮ ಸಂದೇಶ ಯಾತ್ರೆಯ ಮೂಲಕ ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಸಾತ್ವಿಕ ಪೂಜೆ ಸಲ್ಲಿಸಬೇಕೆಂದು ಭಕ್ತರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಅದರಂತೆ ಭಕ್ತರು ಸಂಪೂರ್ಣ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಶ್ರೀಏಳುದಂಡೆ ಮುನೇಶ್ವರಸ್ವಾಮಿ ಜಾತ್ರೆ, ಶಿಂಷಾ ಮಾರಮ್ಮ, ಬೂದುಬಾಳು ವೆಂಕಟರಮಣಸ್ವಾಮಿ, ಕುರುಬನಕಟ್ಟೆ ಹಾಗೂ ಇನ್ನಿತರ ಧಾರ್ಮಿಕ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಅಹಿಂಸೆ, ಅಧ್ಯಾತ್ಮ ಹಾಗೂ ಕೃಷಿ ಪ್ರಧಾನವಾದ ಭಾರತದಿಂದ ಮಾಂಸ ರ್ತು ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು. ಈ ಮೂಲಕ ಭಾರತವನ್ನು ಸಂಪೂರ್ಣ ಜಾನುವಾರು ಹತ್ಯೆ ಮುಕ್ತ ಹಾಗೂ ಮಾಂಸ ರ್ತು ಮುಕ್ತ ರಾಷ್ಟ್ರ ಎಂದು ೋಷಣೆ ಮಾಡಬೇಕು ಎಂದು ಆಗ್ರಹಿಸಿದರು.