ಕರ್ನಾಟಕ ಸೇನಾ ಪಡೆ ಪ್ರತಿಭಟನೆ

30chn5
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮಂಗಳವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಯಿತು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಜಲಾಶಯಗಳು ಬತ್ತುತ್ತಿವೆ. ಇಂತಹ ಸಂದರ್ಭದಲ್ಲೂ ರಾಜ್ಯ ಸರ್ಕಾರ ಜನರ ಹಿತಾಸಕ್ತಿ ಮರೆತು ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಅತ್ಯಂತ ಖಂಡನೀಯ. ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‌ಗೋಪಾಲ್, ನಿಜಧ್ವನಿ ಗೋವಿಂದರಾಜು, ವೀರಭದ್ರ, ತಾಂಡವಮೂರ್ತಿ, ಗು.ಪುರುಷೋತ್ತಮ್, ಸೋಮವಾರಪೇಟೆ ಮಂಜು, ಪಣ್ಯದಹುಂಡಿ ರಾಜು, ರಾಜಪ್ಪ, ಮಹೇಶ್ ಗೌಡ, ಮೂಡ್ಲುಪುರ ಪ್ರಕಾಶ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net