ಕರ್ನಾಟಕ ಸೇನಾ ಪಡೆ ಪ್ರತಿಭಟನೆ

02chn4
Published on

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 151ನೇ ದಿನವಾದ ಶುಕ್ರವಾರ ಪ್ರತಿಭಟನೆ ನಡೆಸಿದರು.

150 ದಿನಗಳಿಂದಲೂ ನಿರಂತರವಾಗಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ಶುಕ್ರವಾರವೂ ಕೂಡ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸಿದರು. ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಬರಗಾಲ ಹೆಚ್ಚುತ್ತಿದೆ. ಜಲಾಶಯಗಳು ಬತ್ತುತ್ತಿವೆ. ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿಗೆ ಸಿಲುಕಬೇಕಾಗುತ್ತದೆ. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‌ಗೋಪಾಲ್, ಗಡಿನಾಡು ಕನ್ನಡ ರಕ್ಷಣಾ ಹೋರಾಟ ವೇದಿಕೆ ಅಧ್ಯಕ್ಷ ಚಾ.ರಂ.ಕುಮಾರ್, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ತಾಂಡವಮೂರ್ತಿ, ವೀರಭದ್ರ, ಮಹೇಶ್ ಗೌಡ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net