ಮಕ್ಕಳಿಗೆ ಸಂವಿಧಾನದ ಅರಿವು ಮೂಡಿಸಿ

07 HANUR 2 A
Published on

ಹನೂರು: ಮಕ್ಕಳಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಿ ಎಂದು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಬುಧವಾರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ. ಅಂಬೇಡ್ಕರ್ ರಚಿಸಿರುವ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವೆನಿಸಿದೆ. ಈ ಮೂಲಕ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಸಲು ಮುಖ್ಯ ಪಾತ್ರವನ್ನು ವಹಿಸಿದೆ. ಇದರಿಂದ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು. ಸಮ ಸಮಾಜವನ್ನು ನಿರ್ಮಿಸುವುದು ಸಂವಿಧಾನದ ಆಶಯ. ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಂವಿಧಾನ ಸಹಕಾರಿಯಾಗಿದೆ ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪ್ರಾಂಶುಪಾಲ ಮಹೇಶ್ ಮಾತನಾಡಿದರು.

ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮಹೇಶ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ಶಿಕ್ಷಣ ಸಂಯೋಜಕರಾದ ಕಿರಣ್ ಕುಮಾರ್, ಕಂದವೇಲು, ಪಪಂ ಸದಸ್ಯರಾದ ಗಿರೀಶ್, ಹರೀಶ್, ಸುದೇಶ್, ಸಂಪತ್‌ಕುಮಾರ್, ಮಹೇಶ್, ಸೋಮಶೇಖರ್, ಮಹೇಶ್‌ನಾಯ್ಕ, ಇದ್ದರು.

ವಿಜೃಂಭಣೆಯ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಆರ್‌ಎಸ್ ದೊಡ್ಡಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಶಾಸಕ ಎಂ.ಆರ್.ಮಂಜುನಾಥ್, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪುಷ್ಪನಮನ ಸಲ್ಲಿಸುವುದರ ಮೂಲಕ ಸ್ವಾಗತಿಸಿದರು. ಬಳಿಕ ವಾದ್ಯ ಮೇಳದೊಂದಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳೊಂದಿಗೆ ಮಲೆಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯ ಮೂಲಕ ಪೆಟ್ರೋಲ್ ಬಂಕ್‌ವರೆಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net