10 ರಂದು ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮ

Published on

ಚಾಮರಾಜನಗರ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ಫೆ.10 ರಂದು ಸಂಜೆ 5 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ಸಾಲೂರುಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು.

ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಗಡಿನಾಡು ಕನ್ನಡ ಸಂಗೀತೋತ್ಸವಕ್ಕೆ ಚಾಲನೆ ನೀಡುವರು. ಶಾಸಕ ಎಂ.ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ,
ಮೈಸೂರು ಸೇಲ್ಸ್‌ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಶಾಸಕ ಎ.ಆರ್ ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಮಲೆ ಮಹದೇಶ್ವರಬೆಟ್ಟ ಗ್ರಾಪಂ ಅಧ್ಯಕ್ಷೆ ಜಿ.ಅರ್ಚನಾ ಪ್ರಕಾಶ್ ಅಥಿತಿಗಳಾಗಿ ಪಾಲ್ಗೊಳ್ಳಲಿದ್ದಾರೆ. 2023ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲ್ ಜಗದೀಶ್ ಮತ್ತು ಸಾಹಿತ್ಯ ಕ್ಷೇತ್ರದ ಪ್ರೊ. ಸಿ. ನಾಗಣ್ಣ ಅವರನ್ನು ಸನ್ಮಾನಿಸಲಾಗುವುದು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್ಪಿ. ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ಸಂತೋಷ್‌ಕುಮಾರ್, ಎಡಿಸಿ ಗೀತಾ ಹುಡೇದ, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net