ಬಿಜೆಪಿ ಗೆಲ್ಲಿಸಲು ಶ್ರಮವಹಿಸಿ

15rajesh3
Published on

ಚಾಮರಾಜನಗರ: ಮುಂದಿನ ಚಾಮರಾಜನಗರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಶ್ರಮವಹಿಸಿ ಎಂದು ಚುನಾವಣೆ ಸಹ ಪ್ರಭಾರಿ ಎಸ್.ವಿ.ಣೀಶ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚಾ.ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರಮೋದಿ ಅವರನ್ನು ಗೆಲ್ಲಿಸಬೇಕು. ಅವರ ಸಾಧನೆಗಳನ್ನು ಪ್ರತಿ ಮನೆಗಳಿಗೂ ತಲುಪಿಸಿ ಎಂದರು. ಕಳೆದ ಬಾರಿ ಹಿರಿಯರಾದ ಸಂಸದ ವಿ.ಶ್ರೀನಿವಾಸಪ್ರಸಾದ್ ಸ್ಪರ್ಧೆ ಮಾಡಿದ್ದರು. ಹೀಗಾಗಿ ಬಿಜೆಪಿ ಗೆಲ್ಲಲು ಹೆಚ್ಚಿನ ಶ್ರಮವಾಗಲಿಲ್ಲ. ಈ ಬಾರಿ ಚುನಾವಣಾ ಕಣಕ್ಕೆ ಹೊಸ ಮುಖವನ್ನು ಕಣಕ್ಕಿಳಿಸಬೇಕಾಗಿದೆ. ಪಕ್ಷದ ಕಾರ್ಯಕರ್ತರು , ಮುಖಂಡರು ಇನ್ನು ಮೂರು ತಿಂಗಳು ಕಾಲ ಪಕ್ಷದ ಸಂಘಟನೆ ಹಾಗೂ ಬಿಜೆಪಿ ಗೆಲುವಿಗೆ ಹಗಲು ರಾತ್ರಿ ಎನ್ನದೇ ದುಡಿಯಬೇಕು ಎಂದು ಹೇಳಿದರು.

ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಾಧನೆ, ವರ್ಚಸ್ಸು ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರದದಲ್ಲಿ ನಡ್ಡಾ ಹಾಗೂ ರಾಜ್ಯದಲ್ಲಿ ವಿಜಯೇಂದ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕರಾದ ಎಸ್. ಬಾಲರಾಜು, ಹರ್ಷವರ್ಧನ್, ಕೇಂದ್ರ ಪರಿಹಾ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಎಸ್.ಮಹದೇವಯ್ಯ, ರಾಷ್ಟ್ರೀಯ ಓಬಿಸಿ ಕಾರ್ಯಕಾರಣಿ ಸದಸ್ಯ ನೂರೊಂದುಶೆಟ್ಟಿ, ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ, ಮುಖಂಡರಾದ ಅಶೋಕ್, ಕೃಷ್ಣಪ್ಪಗೌಡ, ಗುಂಡ್ಲುಪೇಟೆ ಮಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಡ್ನಾಕೂಡು ಪ್ರಕಾಶ್, ಪಿ. ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ನಗರಸಭಾ ಮಾಜಿ ಅಧ್ಯಕ್ಷೆ ಆಶಾ ನಟರಾಜು ಮತ್ತು ಇತರರು ಇದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವೈಫಲ್ಯವನ್ನು ಜನರಿಗೆ ತಿಳಿಸುವ ಜತೆಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆಯನ್ನು ಮನದಟ್ಟು ಮಾಡಿಸೋಣ. ಗ್ಯಾರಂಟಿ ಯೋಜನೆಯ ನೆಪದಲ್ಲಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಅಭಿವೃದ್ದಿಯನ್ನು ಕಡೆಗಣಿಸಿದೆ. ಅಧಿಕಾರಕ್ಕೆ ಬಂದು 10 ತಿಂಗಳಾಗುತ್ತಿದ್ದು, ಕ್ಷೇತ್ರದಲ್ಲಿ ಒಂದೊಂದು ಅಭಿವೃದ್ದಿ ಕೆಲಸಗಳು ಆಗಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಅಭಿವೃದ್ದಿ ಪರ್ವವೇ ನಡೆಯಿತು. ಆದರೆ ಈ ಸರ್ಕಾರ ಒಂದು ಪೈಸೆ ಬಿಡುಗಡೆ ಮಾಡುತ್ತಿಲ್ಲ. ಗ್ಯಾರಂಟಿಗೆ 54 ಸಾವಿರ ಕೋಟಿ ಬೇಕು ಎಂದು ಹಣ ಹೊಂದಿಸುವುದರಲ್ಲಿಯೇ ಕಾಲಾಹರಣ ಮಾಡುತ್ತಿದೆ.ಸಿ.ಎಸ್.ನಿರಂಜನ್‌ಕುಮಾರ್, ಜಿಲ್ಲಾಧ್ಯಕ್ಷ, ಚಾಮರಾಜನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net