ಚಾಮರಾಜನಗರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ೆ.27ರಂದು ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾಹಿತಿ ನೀಡಿದರು.
ದೆಹಲಿಯಲ್ಲಿ ರೈತ ಹೋರಾಟ ಮತ್ತೆ ಚುರುಕುಗೊಳ್ಳುತ್ತಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ರೈತರನ್ನು ಕೇಂದ್ರ ಸರ್ಕಾರ ಅಶ್ರುವಾಯು ಸಿಡಿಸುತ್ತ, ಬಲ ಪ್ರಯೋಗದ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ಈ ನಿಟ್ಟನಲ್ಲಿ ಸಾಮೂಹಿಕ ನಾಯಕತ್ವದ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ೆ.27 ರಂದು ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಜಾಲಹಳ್ಳಿಹುಂಡಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ೋಷಣೆ ಮಾಡಿರುವ ಬೆಂಬಲ ಬೆಲೆಗೆ ಸುಗ್ರೀವಾಜ್ಞೆಯನ್ನು ಹೊರಡಿಸಿ ರಾಜ್ಯಮಟ್ಟದಲ್ಲಿ ಎಂಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸಬೇಕು. ವಿದ್ಯುತ್ ಕಾಯ್ದೆ ವಾಪಸ್ ಪಡೆಯಬೇಕು. ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಬೇಕು. ದೆಹಲಿ ಚಲೋಗೆ ತೆರಳಿರುವ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡ ಬಂದಿಗೌಡನಹಳ್ಳಿ ನಟರಾಜ್, ಕಡಬೂರು ಮಾದೇಶ್, ಉತ್ತಿಂಗೆರೆಹುಂಡಿ ಮಹೇಶ್, ಬಿ.ಎಸ್.ಷಣ್ಮುಗಸ್ವಾಮಿ, ಕಡಬೂರು ನಾಗಣ್ಣ, ಶರವಣ ಹಾಜರಿದ್ದರು.