

ಚಾಮರಾಜನಗರ: ಜನಪರ ಕೆಲಸ ಮಾಡುವ ಅಧಿಕಾರಿಗಳು ಮೆಚ್ಚುಗೆಗೆ ಪಾತ್ರರಾಗುತ್ತಾರೆ ಎಂದು ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ್ ಅಭಿಪ್ರಾಯಪಟ್ಟರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಯಾವ ವ್ಯಕ್ತಿಯಾದರೂ ಸರಿ ಅವರು ಜನಪರ ಕಾಳಜಿಯುಳ್ಳ ಕೆಲಸ ಮಾಡಿದರೆ ಎಲ್ಲರ ಮೆಚ್ಚುಗೆ ಗಳಿಸುತ್ತಾರೆ. ಅವರನ್ನು ಪ್ರಶಸ್ತಿಗಳು ಕೂಡ ಹುಡುಕಿಕೊಂಡು ಬರುತ್ತವೆ ಎಂದರು.
ಅಮರನಾರಾಯಣ್ ಅವರ ಕಾರ್ಯವೈಖರಿ ಬಗ್ಗೆ ಹಿರಿಯ ಪತ್ರಕರ್ತ ಅಬ್ರಾಹಂ ಡಿ ಸಿಲ್ವ, ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಕೃಷಿಕ ಹುಣಸೂರು ಬಸವರಾಜು, ನಿವೃತ್ತ ಐಪಿಎಸ್ ಅಧಿಕಾರಿ ಶರಣಪ್ಪ, ಹಿರಿಯ ಪತ್ರಕರ್ತರಾದ ಎಸ್.ಎಂ.ನಂದೀಶ್, ಗಂಗಾಧರ್, ನಿಂಗಪ್ಪ, ರೇಣುಕೇಶ್, ಪುಟ್ಟರಾಜು, ಶ್ರೀಸಾಯಿಮಂಜು, ಪ್ರಶಾಂತ್ ಮತ್ತು ಇತರರು ಹಾಜರಿದ್ದರು.