

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಗು.ಪುರುಷೋತ್ತಮ್, ಪ್ರಕಾಶ್, ತಾಂಡವಮೂರ್ತಿ, ರಾಚಪ್ಪ, ವೀರಭದ್ರ ಇತರರು ಭಾಗವಹಿಸಿದ್ದರು.