ಜಿಲ್ಲಾ ಉಸ್ತುವಾರಿ ಸಚಿವರಿಗೆ ೇರಾವ್ ಹಾಕಲು ಯತ್ನ

26chn7
Published on

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೇಷ್ಮೆ, ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ಗೆ ೇರಾವ್ ಹಾಕಲು ಹೊರಟಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರನ್ನು ಪೊಲೀಸರು ಶುಕ್ರವಾರ ಬಂಧಿಸಿ, ಬಿಡುಗಡೆ ಮಾಡಿದರು.

ನಗರದ ನಂದಿಭವನದ ರಸ್ತೆಯಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸುತ್ತಾ ಜಿಲ್ಲಾ ಕ್ರೀಡಾಂಗಣದ ಬಳಿ ಆಗಮಿಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದರು. ಬಳಿಕ ರೈತರಿಗೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರನ್ನು ಭೇಟಿ ಮಾಡಿಸಲು ಪೊಲೀಸರು ಮುಂದಾದರು. ಆದರೆ ರೈತರು ಇದಕ್ಕೆ ಒಪ್ಪಿಗೆ ನೀಡಲಿಲ್ಲ. ೇರಾವ್ ಹಾಕುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ರೈತರನ್ನು ಬಂಧಿಸಿದರು. ಬಳಿಕ ಬಿಡುಗಡೆ ಮಾಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ಮಾತನಾಡಿ, ಕಳೆದ ವರ್ಷದ ಕಬ್ಬಿನ ಬಾಕಿ ಹಣವನ್ನು ನೀಡಬೇಕು. ಈ ವರ್ಷ ಕಬ್ಬಿಗೆ 4 ಸಾವಿರ ರೂ. ನಿಗದಿ ಮಾಡಬೇಕು. ಕಾರ್ಖಾನೆಗಳಲ್ಲಿ ವೇ ಬ್ರಿಡ್ಜ್ ನಿರ್ಮಾಣ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು, ಜನ ಸಂಪರ್ಕ ಸಭೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಹಾರವಾಗಬೇಕು ಎಂದು ಒತ್ತಾಯಿಸಿ ಸಚಿವರಿಗೆ ೇರಾವ್ ಹಾಕಲು ಯತ್ನಿಸಿದ್ದೆವು ಎಂದರು.
ಕಬ್ಬಿನ ಕಟಾವು ಸಾಗಾಣಿಕೆಯನ್ನು ಕಾರ್ಖಾನೆಗಳೇ ಒಪ್ಪಿಕೊಳ್ಳಬೇಕು. ಎಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡಬೇಕು. ಎಥೆನಾಲ್ ಅನ್ನು ಸರ್ಕಾರ ಖರೀದಿ ಮಾಡಿ ಬಳಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು. ಎಕರೆಗೆ ಕನಿಷ್ಠ 25 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು. ಈ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಸಚಿವರು ಜಿಲ್ಲೆಗೆ ಬಂದರೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಲೆಯೂರು ಹರ್ಷ, ಹಾಲಿನ ನಾಗರಾಜು, ರವಿ, ಮಲೆಯೂರು ಮಹೇಂದ್ರ, ಬಸವರಾಜಪ್ಪ, ಸತೀಶ, ಸಿದ್ದರಾಜು, ಕಾಳಪ್ಪ, ಮಹೇಶ, ಹರಳೀಕಟ್ಟೆ ಕುಮಾರ್, ಪ್ರಭುಸ್ವಾಮಿ, ಶ್ರೀಕಂಠ, ಚಿಕ್ಕಸ್ವಾಮಿ, ಹಾಡ್ಯ ರವಿ, ಕೆರೆಹುಂಡಿ ರಾಜಣ್ಣ, ಶಿವಣ್ಣ, ದೇವನೂರು ನಾಗೇಂದ್ರ, ಕುರಹಟ್ಟಿ ಗುರುಸ್ವಾಮಿ ಮತ್ತು ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net