

ಬೆಂಗಳೂರು: ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಇತ್ತೀಚೆಗಷ್ಟೇ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದುಕೊಂಡಿದ್ದರು. ಇದೀಗ ತಮ್ಮ ವಿಚ್ಛೇದನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಲು ಸ್ವತಃ ಇಬ್ಬರು ಸುದ್ದಿಗೋಷ್ಠಿ ನೀಡಲು ಮುಂದಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮ್ಮಿಬ್ಬರ ಡಿವೋರ್ಸ್ ಬಗ್ಗೆ ಅಪಪ್ರಚಾರ ಕೇಳಿಬರುತ್ತಿರುವ ಹಿನ್ನೆಲೆ ಇಂದು ಮಧ್ಯಾಹ್ನ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೊಡಲು ಇದೀಗ ಸ್ವತಃ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮುಂದಾಗಿದ್ದಾರೆ.
ವಿಚ್ಛೇದನ ಪಡೆದುಕೊಂಡಿದ್ದರ ಹಿಂದಿರುವ ಅಸಲಿ ಕಾರಣವೇನು ಎಂಬುದನ್ನು ಜನರ ಮುಂದಿಡಲು ಸಜ್ಜಾದ ಚಂದನ್ ಮತ್ತು ನಿವೇದಿತಾ ಜೋಡಿ, ಬೆಂಗಳೂರಿನ ಮಾಗಡಿ ರಸ್ತೆಯ ಎಂಎಂಬಿ ಲೆಗೆಸಿಯಲ್ಲಿ ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.