ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ! ‘ಕಾಟನ್ ಕ್ಯಾಂಡಿ’ Chandan Shettyಗೆ ಎದುರಾಯ್ತಾ? ಸಂಕಷ್ಟ..

Chandan Shetty
Published on

ಬೆಂಗಳೂರು: ( Chandan Shetty ) ಚಂದನ್ ಶೆಟ್ಟಿ ನ್ಯೂ ಇಯರ್​ ಹೊಸ್ತಿಲಿನಲ್ಲಿ ‘ಕಾಟನ್ ಕ್ಯಾಂಡಿ’ ಹೆಸರಿನ ಹಾಡು ಬಿಡುಗಡೆ ಮಾಡಿದ್ದಾರೆ.ಚಂದನ್ ಶೆಟ್ಟಿ ವಿರುದ್ಧ ಕನ್ನಡದ ರ್ಯಾಪರ್ ಒಬ್ಬರು ಇದೀಗ ಕೃತಿ ಚೌರ್ಯ ಆರೋಪ ಮಾಡಿದ್ದಾರೆ.

ರಾಕ್‌ಸ್ಟಾರ್ ಯುವರಾಜ್ 'ಕಾಟನ್ ಕ್ಯಾಂಡಿ' ಟ್ಯೂನ್  ನನ್ನ ಈ ಹಿಂದಿನ ಪಾರ್ಟಿ ಸಾಂಗ್‌ ನಕಲಿನಂತೆಯೇ ಇದ್ದು, ದೂರು ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

‘ಕಾಟನ್ ಕ್ಯಾಂಡಿ’ ಸಿನಿಮಾದ ಹಾಡಿನ ಕೆಲ ಸಾಲುಗಳು, ಯುವರಾಜ್ ಅವರ ಹಳೆಯ ಹಾಡನ್ನು ಹೋಲುತ್ತಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಚಂದನ್ ಶೆಟ್ಟಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಯುವರಾಜ್ ಹೆಸರಿನ ಮತ್ತೊಬ್ಬ ರ್ಯಾಪರ್, ಚಂದನ್ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದು, ತಾನು ಆರು ವರ್ಷದ ಹಿಂದೆ ‘ವೈ ಬುಲ್ ಪಾರ್ಟಿ’ ಹಾಡಿನ ಮೊದಲ ಪಲ್ಲವಿ ಹಾಗೂ ಎರಡನೇ ಚರಣ ನಕಲು ಮಾಡಿ ತಮ್ಮ ಹಾಡಿನಲ್ಲಿ ಬಳಸಿಕೊಂಡಿದ್ದಾರೆ. ಚಂದನ್ ಶೆಟ್ಟಿಯೇ ಈ ಬಗ್ಗೆ ಮಾತನಾಡುತ್ತಾರೆ ಎಂದು ಕಾದಿದ್ದೆ ಆದರೆ ಅವರು ಈ ಬಗ್ಗೆ ಎಲ್ಲೂ ಮಾತನಾಡಿಲ್ಲ. ನನ್ನ ಬಳಿಯೂ ಅವರು ಈ ಬಗ್ಗೆ ಕೇಳಿಲ್ಲ. ಹಾಗಾಗಿ ಈಗ ನಾನೇ ಈ ಬಗ್ಗೆ ಮಾತನಾಡುತ್ತಿದ್ದೇನೆ. ಚಂದನ್ ಶೆಟ್ಟಿ ವಿರುದ್ಧ ನಾವು ಕಾನೂನು ಮೊರೆ ಹೋಗಲಿದ್ದೀವಿ’ ಎಂದಿದ್ದಾರೆ ಯುವರಾಜ್.

‘ಆ ಹಾಡನ್ನು ನಾನು ಬಹಳ ಕಷ್ಟಪಟ್ಟು ಮಾಡಿದ್ದೆ. ಆಗಲೇ ಹಣ ಕೂಡಿಟ್ಟು 17 ಲಕ್ಷ ರೂಪಾಯಿ ಖರ್ಚು ಮಾಡಿ ಹಾಡು ಮಾಡಿದ್ದೆ. ‘ಕಾಟನ್ ಕ್ಯಾಂಡಿ’ ಹಾಡಿನಲ್ಲಿ ನನ್ನ ಟ್ಯೂನ್ ಮಾತ್ರವೇ ಅಲ್ಲದೆ ಇನ್ನೊಬ್ಬರ ಬಿಜಿಎಂ ಅನ್ನು ಸಹ ಕದ್ದಿದ್ದಾರೆ. ಟ್ಯೂನ್ ಬೇಕು ಎಂದು ಕೇಳಿದ್ದರೆ ನಾನೇ ಕೊಟ್ಟುಬಿಡುತ್ತಿದ್ದೆ’ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net