ಮಾ.5ರಿಂದ ಚಂದ್ರಗುತ್ತಿ ಜಾತ್ರೋತ್ಸವ

sor sabhe
ಸೊರಬ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೋತ್ಸವದ ಕುರಿತು ನಡೆದ ಸಭೆಯಲ್ಲಿ ಎಸಿ ಆರ್.ಯತೀಶ್, ಸರಿತಾ, ಎಂ.ಬಿ.ರೇಣುಕಪ್ರಸಾದ್, ದೃಷ್ಟಿ ಜೈಸ್ವಾಲ್, ಮಂಜುಳಾ ಹೆಗಡಾಳ್ ಇತರರಿದ್ದರು.
Published on

ಸೊರಬ: ಶ್ರೀ ರೇಣುಕಾಂಬಾ ದೇವಿ ಜಾತ್ರಾ ಮಹೋತ್ಸವ ಮಾ.5ರಿಂದ 10ರವರೆಗೆ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಸಾಗರ ಉಪವಿಭಾಗಾಧಿಕಾರಿ ಆರ್.ಯತೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಚಂದ್ರಗುತ್ತಿ ಶ್ರೀ ರೇಣುಕಾಂಬಾ ಆಡಳಿತ ಮಂಡಳಿ ಕಚೇರಿಯಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾ.8ರಂದು ದೇವಿಯ ಮಹಾರಥೋತ್ಸವ ಜರುಗಲಿದೆ. ಭಕ್ತರಿಗೆ ಕುಡಿಯುವ ನೀರು, ನೆರಳಿಗೆ ಶಾಮಿಯಾನ, ಶೌಚಗೃಹ, ಪಾರ್ಕಿಂಗ್ ವ್ಯವಸ್ಥೆ ಮತ್ತಿತರ ಸೌಲಭ್ಯ ಕಲ್ಪಿಸಬೇಕು ಎಂದರು.

ರಕ್ಷಣಾ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ಗ್ರಾಮದಲ್ಲಿ ದೀಪಾಲಂಕಾರ ಮಾಡಬೇಕು ಮತ್ತು ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ತಿಳಿಸಿದರು.

ಶ್ರೀ ರೇಣುಕಾಂಬಾ ಕಲ್ಯಾಣ ಮಂಟಪಕ್ಕೆ ಸುಣ್ಣ-ಬಣ್ಣ ಮಾಡಬೇಕು ಹಾಗೂ ಜಾತ್ರೆಯಲ್ಲಿ ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಸರಿತಾ, ಗ್ರಾಪಂ ಉಪಾಧ್ಯಕ್ಷ ಎಂ.ಬಿ.ರೇಣುಕಪ್ರಸಾದ್, ಪ್ರೊಬೇಷನರಿ ಐಎಎಸ್ ಅಧಿಕಾರಿ ದೃಷ್ಟಿ ಜೈಸ್ವಾಲ್, ತಹಸೀಲ್ದಾರ್ ಮಂಜುಳಾ ಹೆಗಡಾಳ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾಕುಮಾರಿ, ತಾಪಂ ಮಾಜಿ ಸದಸ್ಯ ಎಚ್.ಗಣಪತಿ, ಸಿಪಿಐ ರಾಜಶೇಖರ್, ಇಒ ಪ್ರದೀಪ್, ದಸರಾ ಉತ್ಸವ ಸಮಿತಿ ಅಧ್ಯಕ್ಷ ಆರ್.ಶ್ರೀಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net