ಡಿ.12 ರಂದು ಮೆಟ್ರೋ ಸೇವೆಯ ಸಮಯದಲ್ಲಿ ಬದಲಾವಣೆ

metro
Published on

ಬೆಂಗಳೂರು: ಕೆಪಿಎಸ್‌ಸಿ-ಪಂಚಾಯತ್ ಅಭಿವೃದ್ದಿ ಅಧಿಕಾರಿ(ಪಿಡಿಒ) ಪರೀಕ್ಷೆಯು ಡಿ.12 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೆಟ್ರೋ ಸೇವೆಯ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಪಿಡಿಒ ಪರೀಕ್ಷೆಯ ಅಭ್ಯರ್ಥಿಗಳು ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್‌ಸಿಎಲ್ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ ೭ ಗಂಟೆಯ ಬದಲಾಗಿ ೫.೩೦ ಕ್ಕೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಮತ್ತು ವೈಟ್‌ಫೀಲ್ಡ್(ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೇ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ ೫.೩೦ ಕ್ಕೆ ಹೊರಡಲಿದೆ. ಈ ಸೌಲಭ್ಯವನ್ನು ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ಉಪಯೋಗಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net