ಶಿಕ್ಷಣ ಇಲಾಖೆ ಸಭೆ: ಅ.5ರಂದು ನಿರ್ಧಾರವಾಗಲಿದೆಯೇ ಶಾಲಾ ಸಮಯ ನಿಗದಿ?

Traffic restrictions
Published on

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಶಾಲೆಗಳ ಸಮಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ಅ.5ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಮಾಲೋಚನೆ ನಡೆಸುತ್ತಿದೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ ಗುರುವಾರ ಬೆಳಗ್ಗೆ 11ಗಂಟೆಗೆ ಸಭೆ ನಡೆಯಲಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಹಾಗೂ ಪಾಲಕರ ಸಂಘದ ಸಂಸ್ಥೆಗಳ ಪ್ರತಿನಿಧಿಗಳು, ಸಂಚಾರ ಪೊಲೀಸರು ಹಾಗೂ ಶಾಲಾ ವಾಹನಗಳ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ. ಪ್ರತಿ ಸಂಘಟನೆಯಿಂದ ಇಬ್ಬರು ಮಾತ್ರ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net