

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ (POCSO Case) ಸಿಲುಕಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಮತ್ತು ನಾಲ್ವರ ವಿರುದ್ಧ ಇದೀಗ ಸಿಐಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಇಂದು ಅಧಿಕಾರಿಗಳು ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಹಿಂದೆ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿತ್ತು. ಆದ್ರೆ, ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ತನಿಖೆಗೆ ಹಾಜರಾಗದ ಕಾರಣ ಚಾರ್ಜ್ಶೀಟ್ ಸಲ್ಲಿಸಲು ಆಗಿರಲಿಲ್ಲ. ಬಳಿಕ ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರಾಗುವಂತೆ ಬಿಎಸ್ವೈಗೆ ಸೂಚನೆ ನೀಡಲಾಗಿತ್ತು. ಅದರಂತೆಯೇ ಕೋರ್ಟ್ ಆದೇಶದ ಬೆನ್ನಲ್ಲೇ ಸಿಐಡಿ ತನಿಖೆಗೆ ಸಹಕರಿಸಿದ್ದರು. ಪ್ರಸ್ತುತ 750 ಪುಟಗಳ ಚಾರ್ಜ್ಶೀಟ್ ಅನ್ನು ಒಂದನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ.