ಚೆಕ್ ಬೌನ್ಸ್ ಕೇಸ್​: ಶಾಸಕ ಕೆ.ವೈ.ನಂಜೇಗೌಡಗೆ 49.65 ಲಕ್ಷ ರೂ. ದಂಡ!

ky nanjegowda
Published on

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

ರಾಮಚಂದ್ರ.ಜಿ ಎಂಬುವರ 40 ಲಕ್ಷ ಸಾಲ ಮರು ಪಾವತಿಸದ ಹಿನ್ನೆಲೆ, ಸಾಲ ಮರುಪಾವತಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಜೆ.ಪ್ರೀತ್ ಅವರಿಂದ ಪೀಠವು, ಶಾಸಕ ಕೆ.ವೈ.ನಂಜೇಗೌಡಗೆ 49.65 ಲಕ್ಷ ದಂಡ ವಿಧಿಸಿದ್ದು, ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net