

Gold Rates: ಕಳೆದ ಒಂದು ವಾರದಿಂದ ಕೆಜಿ ಬೆಳ್ಳಿ ದರದಲ್ಲಿ ಹೆಚ್ಚಳ ಕಂಡಿದೆಯೇ ಹೊರತು ಕಡಿಮೆಯಾಗುವ ಲಕ್ಷಣಗಳು ಮರೀಚಿಕೆಯಾಗಿದೆ. ಮತ್ತೊಂದೆಡೆ, ಚಿನ್ನದ ಬೆಲೆಗಳು ಕ್ರಮೇಣವಾಗಿ ಇಳಿಕೆಯಾಗುತ್ತಿದ್ದು, ಮದುವೆ ಸೀಸನ್ನಲ್ಲಿರುವ ಚಿನ್ನದ ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಹಾಗಿದ್ದರೆ, ಚಿನ್ನದ ದರ ಎಷ್ಟು ಕಡಿಮೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬೆಲೆ ಎಷ್ಟಿದೆ ಎಂಬುದರ ವಿವರ ಹೀಗಿದೆ ಗಮನಿಸಿ.
ಕಳೆದ ಶನಿವಾರದಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡುಬಂದಿದ್ದು, ಕಳೆದ ಮೂರು ದಿನಗಳಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 2 ಸಾವಿರ ರೂ. ಕಡಿಮೆಯಾಗಿದೆ. ಮಂಗಳವಾರ (ಜೂ.10) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 100 ರೂ. ಕಡಿಮೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ತೀವ್ರವಾಗಿ ಕುಸಿದಿದೆ. ಒಂದು ಔನ್ಸ್ ಗೋಲ್ಡ್ ಬೆಲೆ 17 ಡಾಲರ್ ಕುಸಿದಿದೆ. ಪ್ರಸ್ತುತ 3,316 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಈ ಮಧ್ಯೆ ಒಂದು ಕೆಜಿ ಬೆಳ್ಳಿ ಬೆಲೆ 1,000 ರೂ. ಹೆಚ್ಚಾಗಿದೆ.
ನಿಮ್ಮ ಗಮನಕ್ಕೆ: ಮೇಲೆ ತಿಳಿಸಲಾದ ದರ ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ಮಾಹಿತಿ. ಚಿನ್ನ-ಬೆಳ್ಳಿ ಬೆಲೆಗಳು ದಿನಕ್ಕೆ ಹಲವು ಬಾರಿ ಏರುಪೇರು ಆಗುತ್ತಿರುತ್ತವೆ. ನಿಖರವಾದ ಬೆಲೆಗಳಿಗಾಗಿ, ನಿಮ್ಮ ಹತ್ತಿರದ ಆಭರಣ ಮಳಿಗೆ ಅಥವಾ ಅಧಿಕೃತ ವೆಬ್ಸೈಟ್ ದರ ಪರಿಶೀಲಿಸಿ.