ಬೆಳ್ಳಿ 3000 ರೂ. ಇಳಿಕೆ! ಚಿನ್ನದ ಬೆಲೆ ಕೂಡ ಕುಸಿತ: ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂದಿನ ದರ | Gold Rates

gold rate
Published on

ನವದೆಹಲಿ: ದೀಪಾವಳಿ ಹಬ್ಬ ಕಳೆಯುತ್ತಿದ್ದಂತೆ ಒಂದು ವಾರ ಸತತವಾಗಿ ಕುಸಿದ ಚಿನ್ನದ ಬೆಲೆ (Gold) ಇದೀಗ ಮತ್ತೆ ಇಳಿಕೆಯತ್ತ ಮುಖಮಾಡಿದೆ. ಗೋಲ್ಡ್​ ಬೆಲೆಯೊಂದಿಗೆ ಬೆಳ್ಳಿ ದರವು ಕಡಿಮೆಯಾಗಿದೆ. ಇದು ಖರೀದಿದಾರರಿಗೆ ಶುಭ ಸುದ್ದಿಯಾಗಿದ್ದು, ಶೀಘ್ರವೇ ಕೊಳ್ಳುವಿಕೆಯತ್ತ ಗಮನ ಹರಿಸಬಹುದು ಎಂಬ ಮುನ್ಸೂಚನೆ ನೀಡಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬದಲಾವಣೆಗಳಿಂದಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರವಾಗಿ ಕುಸಿದಿವೆ. ಇಂದು (ನ.04)ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆಯಲ್ಲಿ 710 ರೂ. ಇಳಿದಿದ್ದು, 22 ಕ್ಯಾರೆಟ್ ಚಿನ್ನದ 650 ರೂ. ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಕುಸಿದಿದೆ. ಒಂದು ಔನ್ಸ್ ಚಿನ್ನದ ಬೆಲೆ 12 ಡಾಲರ್​ ಕಡಿಮೆಯಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನ 3,991 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಬೆಳ್ಳಿಯ ಬೆಲೆಯೂ ಇಳಿದಿದೆ. ಒಂದು ಕೆಜಿ ಬೆಳ್ಳಿ 3,000 ರೂ. ಇಳಿಕೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ

  • ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,23,320 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,13,030 ರೂ. ಆಗಿದೆ.
  • ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,22,510 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,12,900 ರೂ.ಗೆ ಬಂದು ನಿಂತಿದೆ.
  • ಇನ್ನು ಹೈದರಾಬಾದ್​ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,12,250 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,12,400 ರೂ. ಆಗಿದೆ.

ಬೆಳ್ಳಿ ಬೆಲೆ 3,000 ರೂ. ಏರಿಕೆ

  • ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 1,51,000 ರೂ.ಗೆ ತಲುಪಿದೆ.
  • ಮುಂಬೈ, ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 1,51,000 ರೂ. ಇದೆ.
  • ಇನ್ನು ಚೆನ್ನೈ, ಹೈದರಾಬಾದ್‌, ತೆಲಂಗಾಣದಲ್ಲಿ ಪ್ರತಿ ಕೆಜಿ ಬೆಲೆ 1,65,000 ರೂ. ಆಗಿದೆ.

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net