

ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಗ್ರಾಹಕರ ತಲೆಯಲ್ಲಿ ಓಡುತ್ತಿರುವುದು ಚಿನ್ನ ಖರೀದಿಸಲು (Gold Rates) ಸೂಕ್ತ ಸಮಯ ಯಾವಾಗ ಎಂದು?. ಪ್ರಸ್ತುತ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಪ್ರಮುಖ ಬದಲಾವಣೆಗಳು ಕಂಡುಬಂದಿದ್ದು, ಗೋಲ್ಡ್ ಕೊಂಚ ಏರಿಕೆಯಾಗಿದೆ.
ಇಂದು (ನ.03) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 200 ರೂ. ಹೆಚ್ಚಾಗಿದ್ದರೆ, 22 ಕ್ಯಾರೆಟ್ ಚಿನ್ನ 150 ರೂ. ಏರಿಕೆಯಾಗಿದೆ. ಕಳೆದ ಹತ್ತು ದಿನಗಳ ಬಳಿಕ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಹೆಚ್ಚಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ 23 ಡಾಲರ್ ಜಾಸ್ತಿಯಾಗಿದೆ. ಇದರೊಂದಿಗೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಒಂದು ಔನ್ಸ್ ಚಿನ್ನದ ದರ 4,007 ಡಾಲರ್‌ಗಳಲ್ಲಿ ಮುಂದುವರೆದಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಗಮನಾರ್ಹವಾಗಿ ಏರಿದೆ. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 2 ಸಾವಿರ ರೂ. ಜಾಸ್ತಿಯಾಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.