ಚಿನ್ನದ ಬೆಲೆಯಲ್ಲಿ ಕುಸಿತ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ | Gold Price

ವಿಜಯವಾಣಿ - 2025-04-04T111642.340
Published on

Gold Price: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಕಿದ ಪ್ರತೀಕಾರದ ಸುಂಕಗಳಿಂದಾಗಿ ಗುರುವಾರ (ಏ.04) ಬಹುತೇಕ ಜಾಗತಿಕ ಮಾರುಕಟ್ಟೆಗಳು ಕುಸಿದಿವೆ. ಇದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಗೆ ಕಾರಣವಾಯಿತು. ಗುರುವಾರ ಬೆಳಗ್ಗೆ, ಒಂದು ಔನ್ಸ್ ಚಿನ್ನದ ಬೆಲೆ 3,145 ಡಾಲರ್​ನಷ್ಟಿತ್ತು. ಆದಾಗ್ಯೂ, ಶುಕ್ರವಾರ ಬೆಳಗ್ಗೆ, ಒಂದು ಔನ್ಸ್ ಚಿನ್ನದ ಬೆಲೆ 3,100 ಡಾಲರ್​ಗೆ ಇಳಿದಿದೆ. ಬೆಳ್ಳಿಯ ಬೆಲೆಯೂ ಕುಸಿತ ಕಂಡಿದೆ.

ಇಂದಿನ ಚಿನ್ನ-ಬೆಳ್ಳಿ ದರ

ನೀವು ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ, ಮುಂದಿನ ದಿನಗಳಲ್ಲಿ ನಿಮಗೆ ಶುಭ ಸುದ್ದಿ ಇನ್ನಷ್ಟು ಸನ್ನಿಹಿತ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರವಾಗಿ ಕುಸಿತ ಕಾಣಲು ಪ್ರಾರಂಭಿಸಿವೆ. ಕಳೆದ ಒಂಬತ್ತು ದಿನಗಳಿಂದ ನಿರಂತರವಾಗಿ ಏರುತ್ತಿದ್ದ ಚಿನ್ನದ ಬೆಲೆ ಇಂದು ಇಳಿಕೆ ಮೂಲಕ ಕೊಂಚ ಬ್ರೇಕ್ ತೆಗೆದುಕೊಂಡಿದೆ. ಶುಕ್ರವಾರ ಬೆಳಗ್ಗೆ ದೇಶಾದ್ಯಂತ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ. 1,740 ರೂ. ಇಳಿಕೆಯಾಗಿದೆ.

10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,600 ರೂ. ಇಳಿಕೆಯಾಗಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ತೀವ್ರವಾಗಿ ಕುಸಿದಿದೆ. ಒಂದು ಕೆಜಿ ಬೆಳ್ಳಿ 4 ಸಾವಿರ ರೂ.ಗೆ ಕಡಿಮೆಯಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಬದಲಾವಣೆಗಳ ಹಿನ್ನೆಲೆಯಲ್ಲಿ ದೇಶದ ಇತರ ಹಲವು ಪ್ರಮುಖ ನಗರಗಳಲ್ಲಿ ಇಂದಿನ ಬೆಲೆಗಳು ಎಷ್ಟಾಗಿದೆ ಎಂಬುದರ ವಿವರ ಹೀಗಿದೆ ಗಮನಿಸಿ.

ದೇಶದ ಪ್ರಮುಖ ನಗರಗಳಲ್ಲಿ

  • ನವದೆಹಲಿಯಲ್ಲಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 84,150 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 91,790 ರೂ.
  • ಮುಂಬೈ, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 84,000 ರೂ.ಗಳಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 91,640 ರೂ.ಗೆ ತಲುಪಿದೆ.
  • ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 84,000 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 91,640 ರೂ. ತಲುಪಿದೆ.

ಹೀಗಿದೆ ಬೆಳ್ಳಿ ಬೆಲೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 99,000 ರೂ.ಗಳಿಗೆ ದಾಖಲಾಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,08,000 ರೂ.ಗೆ ತಲುಪಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,08,000 ರೂ.ಗೆ ತಲುಪಿದೆ,(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net