

Gold Rates: ಆಯುಧ ಪೂಜೆ, ದಸರಾ, ದೀಪಾವಳಿ ಸೇರಿ ಹಲವಾರು ಹಬ್ಬಗಳು ಸಾಲುಗಟ್ಟಿ ನಿಂತಿವೆ. ಈ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗ್ರಾಹಕರನ್ನು ಅಚ್ಚರಿಗೆ ದೂಡುತ್ತಿವೆ. ಕಾರಣ, ದುಪ್ಟಟ್ಟು ಹಾಗೂ ದಿಢೀರ್ ಏರಿಕೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಚಿನ್ನ-ಬೆಳ್ಳಿಯ ಬೆಲೆಯಲ್ಲಿ ಅನಿರೀಕ್ಷಿತ ಬದಲಾವಣೆಗಳು ಸಂಭವಿಸುತ್ತಿವೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.
ಬುಧವಾರ (ಸೆ.24) ಮತ್ತು ಗುರುವಾರ (ಸೆ.25) ಚಿನ್ನದ ಬೆಲೆ ತೀವ್ರವಾಗಿ ಕುಸಿತ ಕಂಡಿದೆ. ಎರಡು ದಿನಗಳಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 1,300 ರೂ. ಇಳಿಕೆಯಾಗಿದೆ. ಆದಾಗ್ಯೂ, ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಶುಕ್ರವಾರ (ಸೆ.26) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 440 ರೂ. ಹೆಚ್ಚಾಗಿದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 400 ರೂ. ಜಾಸ್ತಿಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ ಆರು ಡಾಲರ್ಗಳಷ್ಟು ಹೆಚ್ಚಾಗಿದೆ. ಇದರೊಂದಿಗೆ, ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 3,745 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಏರಿಕೆ ಕಂಡಿದೆ. ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ, ಇಂದು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ಕೆಜಿ ಬೆಳ್ಳಿಗೆ 3 ಸಾವಿರ ರೂ. ಏರಿಕೆಯಾಗಿದೆ. ಇದರೊಂದಿಗೆ ಬೆಳ್ಳಿ ದರ ಒಂದೂವರೆ ಲಕ್ಷ ರೂ. ದಾಟಿ ಮುಂದೋಗಿದೆ. ಕೇವಲ ಚಿನ್ನ ಮಾತ್ರವಲ್ಲ, ಬೆಳ್ಳಿಯೂ ಈಗ ಗ್ರಾಹಕರಿಂದ ದೂರ ಸರಿದಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.