

MLA B.Nagendra : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಬಳ್ಳಾರಿ ಗ್ರಾಮೀಣದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿ ಅದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಬಿ.ನಾಗೇಂದ್ರ ದೋಷಿ ಎಂದು ನ್ಯಾಯಾಲಯ ಹೇಳಿದ್ದು, 1 ಕೋಟಿ 25 ಲಕ್ಷ ರೂ.ದಂಡ ವಿಧಿಸಿದೆ. ಒಂದು ವೇಳೆ ದಂಡ ಕಟ್ಟದಿದ್ದರೆ 1 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿದೆ.
VSL ಸ್ಟೀಲ್ ಲಿಮಿಟೆಡ್ ಕಂಪನಿ ಈ ಹಿಂದೆ ನಾಗೇಂದ್ರನ ವಿರುದ್ಧ ಚೆಕ್ಸ್ ಬೌನ್ಸ್ ಕೇಸ್ ದಾಖಲಿಸಿತ್ತು.