

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಸ್ತ ಜಿಲ್ಲಾ ಮರಾಠ ಸಮಾಜದ ಆಶ್ರಯದಲ್ಲಿ 395ನೇ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ.19ರಂದು ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಮೇಶ್ ಬಾಬು ಜಾಧವ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಶಾರದಾ ಪೂರ‌್ಯಾನಾಯ್ಕಾ, ಬಿ.ವೈ.ವಿಜಯೇಂದ್ರ ಮುಖ್ಯ ಅತಿಥಿಗಳಾಗಿರುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಂಎಲ್‌ಸಿಗಳಾದ ಎಸ್.ಎಲ್.ಬೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕಿಷ್ ಬಾನು, ವಿವಿಧ ನಿಗಮಗಳ ಅಧ್ಯಕ್ಷರಾದ ಜಿ.ಪಲ್ಲವಿ, ಎಸ್.ರವಿಕುಮಾರ್, ಆರ್.ಎಂ.ಮಂಜುನಾಥಗೌಡ, ಡಾ. ಅಂಶುಮಂತ್, ಎಚ್.ಎಸ್.ಸುಂದರೇಶ್, ಸಿ.ಎಸ್.ಚಂದ್ರಭೂಪಾಲ್ ಉಪಸ್ಥಿತರಿರುವರು. ಬೆಂಗಳೂರಿನ ಯುವ ವಾಗ್ಮಿ ಹಾರಿಕಾ ಮಂಜುನಾಥ ಭಾಷಣ ಮಾಡುವರು ಎಂದು ತಿಳಿಸಿದರು. ಸಹ ಕಾರ್ಯದರ್ಶಿ ರಾಜಕುಮಾರ್ ಜಗ್ತಾಪ್, ನಗರ ಅಧ್ಯಕ್ಷ ಬಿ.ಕೆ.ದಿನೇಶ್‌ರಾವ್ ಚವ್ಹಾಣ್, ರಾಮರಾವ್, ಟೇಕೋಜಿರಾವ್, ವೀಣಾ ಬಾಯಿ ಸಾವಂತ್, ಶಾಮರಾಮ ಶಿಂಧೆ ಸುದ್ದಿಗೋಷ್ಠಿಯಲ್ಲಿದ್ದರು.