ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೊತ್ತು 6 ಕಿ.ಮೀ ಸಾಗಿ ಆಸ್ಪತ್ರೆಗೆ ದಾಖಲಿಸಿದ ಯೋಧರ ತಂಡ

CRPF
Published on

ಬಿಜಾಪುರ್​: ಸಿಆರ್​ಪಿಎಫ್​ ಯೋಧರ ತಂಡವೊಂದು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಮಂಚದ ಮೇಲೆ ಹಾಕಿಕೊಂಡು ಸುಮಾರು 6 ಕಿ.ಮೀ ದೂರದ ಆಸ್ಪ್ರತೆಗೆ ನೆಡದುಕೊಂಡೇ ತೆರಳಿರುವ ಘಟನೆ ಛತ್ತೀಸ್​ಗಢದ ಬಿಜಾಪುರ್​ ಜಿಲ್ಲೆಯ ಪಡೇದಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ದಿನನಿತ್ಯ ಅಭ್ಯಾಸದಂತೆ ಸಿಆರ್​ಪಿಎಫ್​ ತಂಡವೊಂದು ಅರಣ್ಯ ವ್ಯಾಪ್ತಿಯಲ್ಲಿ ಬರುವ ಪಡೇದಾ ಗ್ರಾಮದಲ್ಲಿ ಗಸ್ತು ತಿರುಗುತ್ತಿತ್ತು. ಈ ವೇಳೆ ಗ್ರಾಮಸ್ಥರನ್ನು ವಿಚಾರಿಸಿದಾಗ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿರುವುದನ್ನು ಹೇಳಿದ್ದಾರೆ.

ಬಳಿಕ ಒಂದು ಕ್ಷಣವನ್ನು ವ್ಯರ್ಥಮಾಡದೆ ಸಿಆರ್​ಪಿಎಫ್​ ತಂಡ ಗರ್ಭಿಣಿಯ ಮನೆಯನ್ನು ತಲುಪಿದಾಗ ಇನ್ನೇನು ಮಗುವಿನ ನಿರೀಕ್ಷೆಯಲ್ಲಿದ್ದ ಆಕೆಯನ್ನು ನೋಡಿದ್ದಾರೆ. ತಕ್ಷಣ ಚಿಕಿತ್ಸೆ ಅವಶ್ಯಕತೆ ಎಂಬುದನ್ನು ಅರಿತಿದ್ದಾರೆ. ಆದರೆ, ಗ್ರಾಮದಲ್ಲಿ ಯಾವುದೇ ಆಸ್ಪತ್ರೆ ಇರದಿರುವುದು ಮತ್ತು ವಾಹನ ಬರಲು ಸರಿಯಾದ ರಸ್ತೆ ಇಲ್ಲವೆಂಬುದು ಯೋಧರ ಗಮನಕ್ಕೆ ಬಂದಿದೆ. ತಕ್ಷಣ ಒಂದು ಮಂಚದ ಮೇಲೆ ಗರ್ಭಿಣಿಯನ್ನು ಹೊತ್ತು ಸಾಗಿದ್ದಾರೆ.

ಸುಮಾರು 6 ಕಿ.ಮೀ ಸಾಗಿದ ಬಳಿಕ ಮುಖ್ಯ ರಸ್ತೆಯೊಂದರಲ್ಲಿ ವಾಹನ ವ್ಯವಸ್ಥೆ ಮಾಡಿ ವಿಜಯಪುರದಲ್ಲಿರುವ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net