ದಾವೂದ್ ಸಾವು ಸುದ್ದಿ ಕುರಿತು ಛೋಟಾ ಶಕೀಲ್​ ಶಾಕಿಂಗ್ ಮೆಸೇಜ್!

dawood-chota shikil
Published on

ಕರಾಚಿ: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂಬ ಸುದ್ದಿ ವೈರಲ್ ಆದ ಈ ಬೆನ್ನಲ್ಲೇ ಆತನ ಆಪ್ತ ಛೋಟಾ ಶಕೀಲ್ ಕಡೆಯಿಂದ ಸ್ಫೋಟಕ ಮೆಸೇಜ್ ಹೊರಬಿದ್ದಿದ್ದು ಅಚ್ಚರಿ ಮೂಡಿಸಿದೆ.

ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಭಾರೀ ವೈರಲ್ ಆಗುತ್ತಿದ್ದು, ಆತನನ್ನು ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತರಹೇವಾರು ಸುದ್ದಿಗಳು ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ಬರುತ್ತಿದ್ದವು. ಇದರ ಬೆನ್ನಲ್ಲೇ ಆತನ ಆಪ್ತ ಛೋಟಾ ಶಕೀಲ್ ಕಡೆಯಿಂದ ಸ್ಫೋಟಕ ಮೆಸೇಜ್ ಬಂದಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ.

“ದಾವೂದ್ ಇಬ್ರಾಹಿಂ ಸಾವಿನ ಸುದ್ದಿ ಸುಳ್ಳು. ಆತನ ಹುಟ್ಟುಹಬ್ಬದಂದು ಇಂತಹ ಸುದ್ದಿಗಳು ಆಗಾಗ ಬರುತ್ತಿರುತ್ತವೆ. ಆತ ಸಂಪೂರ್ಣ ಆರೋಗ್ಯವಾಗಿದ್ದಾನೆ” ಎಂದು ಛೋಟಾ ಶಕೀಲ್ ಹೇಳಿದ್ದಾನೆ. ಅಂದಹಾಗೆ ಛೋಟಾ ಶಕೀಲ್‌’ನನ್ನು ದಾವೂದ್‌’ನ ಬಲಗೈ ಬಂಟ ಎಂದು ಕರೆಯಲಾಗುತ್ತದೆ.

ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕರಾಚಿಯಲ್ಲಿ ಯಾರೋ ಅಪರಿಚಿತ ವ್ಯಕ್ತಿ ವಿಷಪ್ರಾಶಾನ ಮಾಡಿದ್ದಾನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ವೈರಲ್ ಆಯಿತು. ಇದಾದ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಯಿತು. ಪಾಕಿಸ್ತಾನದಲ್ಲಿ ಗೂಗಲ್ ಮತ್ತು ಟ್ವಿಟರ್ ಕೂಡ ಸ್ಥಗಿತಗೊಳಿಸಲಾಗಿತ್ತು.

ಅಂದಹಾಗೆ ದಾವೂದ್ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ. ದರೋಡೆ, ಡಕಾಯಿತಿ, ಕಳ್ಳಸಾಗಣೆ, ಸುಲಿಗೆ, ಅಪಹರಣ ಮತ್ತು ಬಾಂಬ್ ಸ್ಫೋಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾವೂದ್ ಇಬ್ರಾಹಿಂ ಕೈವಾಡವಿದೆ. ಅಷ್ಟೇ ಅಲ್ಲದೆ, 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಕೂಡ ಇದೇ ಪಾತಕಿ. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net