ನಿತ್ಯೋತ್ಸವ ಕವಿ ನಿಸಾರ್​ ಅಹಮದ್​ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿತು: ಸಿಎಂ ಯಡಿಯೂರಪ್ಪ

CM yediyuraapa 3 May 20
Published on

ಬೆಂಗಳೂರು: ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ನಿಸಾರ್​ ಅಹ್ಮದ್ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಾಗೇ ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ಅವರೂ ಕೂಡ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ನಿತ್ಯೋತ್ಸವ ಕವಿ, ಕನ್ನಡ ಕಾವ್ಯ ಜಗತ್ತಿಗೆ ನವೋಲ್ಲಾಸ ತಂದುಕೊಟ್ಟ ಉತ್ಸಾಹದ ಚಿಲುಮೆ ಪ್ರೊ.ಕೆ.ಎಸ್​.ನಿಸಾರ್ ಅಹ್ಮದ್​ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಅವರ ಕುಟುಂಬಕ್ಕೆ, ಸಾರಸ್ವತ ಲೋಕಕ್ಕೆ ಇವರ ಅಗಲಿಕೆಯನ್ನು ಭರಿಸುವ ಶಕ್ತಿ ದೊರೆಯಲಿ. ಪ್ರೊ.ನಿಸಾರರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net