ಮಗದೊಮ್ಮೆ ಸಿಎಂ ಸಮಜಾಯಿಷಿ

cm siddaramaiah
Published on

ಬೆಂಗಳೂರು: ವಕ್ಫ್ ವಿವಾದದ ಕುರಿತು ಮುಖ್ಯಮಂತ್ರಿಯವರು ಮಗದೊಮ್ಮೆ ಸ್ಪಷ್ಟನೆ ನೀಡಿದ್ದು, ಯಾವುದೇ ರೈತರನ್ನು ಒಕ್ಕಲೆಬ್ಬಿಸಲು ನಾವು ಬಿಡುವುದಿಲ್ಲ, ಇದು ನಮ್ಮ ಸ್ಪಷ್ಟ ನಿರ್ಧಾರ. ವಿಪಕ್ಷಗಳ ಅಪಪ್ರಚಾರಗಳಿಗೆ ಕಿವಿಗೊಡದಿರಿ, ನಿಮ್ಮ ಜತೆ ನಮ್ಮ ಸರ್ಕಾರ ಇದೆ ಎಂದು ಹೇಳಿದ್ದಾರೆ.

ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾದ ನೋಟಿಸನ್ನು ತಕ್ಷಣ ಹಿಂಪಡೆಯಬೇಕು, ಮ್ಯುಟೇಷನ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ನಿರ್ದೇಶನವನ್ನು ಸಹ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net