ಸಿಎಂ ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ ದಾಖಲು! ಎಲ್ಲಾ.. ಕಾರ್ಯಕ್ರಮಗಳು ರದ್ದು..Chief Minister Siddaramaiah Urgently Admitted To Hospital

Siddaramaiah
Published on

 ಬೆಂಗಳೂರು: ( Chief Minister Siddaramaiah Urgently Admitted To Hospital ) ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು   ಕಾಲು ನೋವಿನಿಂದ ಬಳಲುತ್ತಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಈಗಾಗಲೇ ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರವಾಸವನ್ನು ನಿಗದಿ ಮಾಡಲಾಗಿತ್ತು. ಆದರೆ, ಇದೀಗ ಆಸ್ಪತ್ರೆಗೆ ಹೋಗಬೇಕಾದ ಹಿನ್ನೆಲೆಯಲ್ಲಿ ಪ್ರವಾಸ ಹಾಗೂ ವೇದಿಕೆ ಕಾರ್ಯಕ್ರಮವನ್ನು ರದ್ದುಗೊಳಿಸಿ, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net