ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸುತ್ತಾರೆ: ಶಾಸಕ ಡಾ. ಸುಧಾಕರ್

dr K Sudhakar
Published on

ಚಿಕ್ಕಬಳ್ಳಾಪುರ: ಬಿಜೆಪಿ ಮತ್ತು ಬಿ.ಎಸ್​.ಯಡಿಯೂರಪ್ಪ ಹೇಳಿದಂತೆ ನಡೆದುಕೊಳ್ಳುತ್ತಾರೆ. ಹಾಗಾಗಿ ನನ್ನನ್ನು ನಂಬಿದವರಿಗೂ ಯಾವುದೇ ಆತಂಕ ಬೇಡ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಶಾಸಕ ಡಾ. ಸುಧಾಕರ್​ ಹೇಳಿದರು.

ನಂದಿ ಗ್ರಾಮದಲ್ಲಿ ಮಾತನಾಡಿ, ಹೈಕಮಾಂಡ್​ ಜತೆ ಮಾತನಾಡಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಾತು ಕೊಟ್ಟಿದ್ದಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಳ್ಳಬಾರದು ಎಂಬುದು ಸಿಎಂಗೆ ಬಿಟ್ಟ ವಿಚಾರ ಎಂದರು.

ಪ್ರಸ್ತುತ ಸ್ಥಿತಿಗತಿ ಅವಲೋಕನ ಮಾಡಿ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net