

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಗುರುವಾರ (ಸೆ.10) ಬೆಳಗ್ಗೆ 11 ಗಂಟೆಗೆ ಮಹತ್ವದ ಸಭೆ ಕರೆದಿದ್ದಾರೆ.
ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಯಡಿಯೂರಪ್ಪನವರು ಕರೊನಾ ಪರಿಸ್ಥಿತಿಯನ್ನು ಚರ್ಚಿಸಲಿದ್ದಾರೆ. ಇದನ್ನೂ ಓದಿ: ‘ಉದ್ಯೋಗ ಕೊಡುತ್ತೇವೆ ಎಂದು ಹೇಳಿ, ಪಕೋಡ ಮಾರುವ ಐಡಿಯಾ ಕೊಟ್ರು…’
ಕರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದರೂ ದಿನೇದಿನೇ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಈ ಸಭೆ ಕರೆದಿದ್ದು, ತುರ್ತಾಗಿ ಆಗಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.