ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎನ್ನುವ ಕೆಯುಡಬ್ಲೂೃಜೆ ಮನವಿಗೆ ಕೆ.ವಿ.ಪ್ರಭಾಕರ್ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದು, ಪರಿಶೀಲಿಸುವ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಪ್ರಭಾಕರ್ ಅವರಿಗೆ ನಿಯೋಗ ಅಭಿನಂದನೆಗಳನ್ನು ಸಲ್ಲಿಸಿತು.