

ಲಕ್ಕೂರು: ಮಾಲೂರು ತಾಲೂಕು ಚಿಕ್ಕತಿರುಪತಿ ದೇವಸ್ಥಾನದಲ್ಲಿ ಜ.1ರಂದು ವರ್ಷಾಚರಣೆ ಹಾಗೂ ಜ.2ರಂದು ವೈಕುಂಠ ಏಕಾದಶಿ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮಗಳಿಗೆ ದೇವಾಲಯವು ಸಿದ್ಧಗೊಂಡಿದೆ.
ಈ ಎರಡು ದಿನ ನಡೆಯುವ ಪೂಜಾ ಕೈಂಕರ್ಯಗಳಲ್ಲಿ ರಾಜ್ಯದ ನಾನಾ ಭಾಗಗಳಿಂದ ಹಾಗೂ ನೆರೆಯ ತಮಿಳುನಾಡು, ಕೇರಳ, ಆಂಧ್ರ್ರಪ್ರದೇಶ, ತೆಲಂಗಾಣ ಸೇರಿ ಹಲವು ರಾಜ್ಯಗಳಿಂದ ಹೆಚ್ಚಿನ ಭಕ್ತರು ಆಗಮಿಸಲಿದ್ದಾರೆ. ಭಕ್ತರಿಗೆ ಕುಡಿಯುವ ನೀರು, ದೇವಾಲಯದ ಮುಂಭಾಗದಲ್ಲಿ ಪೆಂಡಾಲ್ ನಿರ್ಮಿಸಲಾಗಿದೆ. ಮುಡಿ ಅರ್ಪಿಸಲು ಹಾಗೂ ದರ್ಶನಕ್ಕೆ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಾ$ನಿಂಗ್ ವ್ಯವಸ್ಥೆ ಮಾಡಲಾಗಿದೆ.
ಕರೊನಾ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಹಾಗೂ ಜಿಲ್ಲಾಧಿಕಾರಿಗಳ ಆದೇಶದನ್ವಯ ದೇವಾಲಯವನ್ನು ಶುಚಿಗೊಳಿಸಿ ಸೋಂಕಿನ ನಿಯಮಾವಳಿಗಳನ್ನು ಕಡ್ಡಾಯಗೊಳಿಸಿದ್ದು, ದೇವಾಲಯಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. | ಟಿ.ಸೆಲ್ವಮಣಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ